ಬೆಳಗಾವಿ ಅಧಿವೇಶನ ಶತಮಾನೋತ್ಸವ ಯಶಸ್ವಿಗೊಳಿಸಿ

SDP BHIMANNA
Published on

ಸಿದ್ದಾಪುರ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆದು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿರುವ ಶತಮಾನೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಪಟ್ಟಣದ ಹೊಸೂರಿನ ಬಂಕೇಶ್ವರ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಿ. 26ರಂದು ಎಐಸಿಸಿ ಕಾರ್ಯಕಾರಿ ಸಭೆ ಹಾಗೂ 27ರಂದು ಬೃಹತ್ ಸಮಾವೇಶ ನಡೆಯಲಿದೆ ಎಂದರು.

ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಡಿಸಿಸಿ ಉಪಾಧ್ಯಕ್ಷ ವಿ.ಎನ್. ನಾಯ್ಕ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಬಿ.ಆರ್. ನಾಯ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೀಮಾ ಹೆಗಡೆ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ಲಾ ಹೇರೂರ, ಪರಿಶಿಷ್ಟ ವಿಭಾಗದ ಅಧ್ಯಕ್ಷ ವೆಂಕಟ್ರಮಣ ಹಸ್ಲರ್, ಜಿಪಂ ಮಾಜಿ ಸದಸ್ಯೆ ಇಂದಿರಾ ನಾಯ್ಕ, ಪ್ರಮುಖರಾದ ನಾಸಿರ್ ಖಾನ್, ಸಿ.ಆರ್. ನಾಯ್ಕ, ವಿವೇಕ ಭಟ್, ನಟರಾಜ ಜಿಡ್ಡಿ, ಸೀತರಾಮ ಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net