ಬೆಳಗಾವಿ ಅಧಿವೇಶನ ಶತಮಾನೋತ್ಸವ

Published on

ಬಳ್ಳಾರಿ : ರಾಷ್ಟಪಿತ ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ನಿಮಿತ್ತ ಕಾಂಗ್ರೆಸ್ ಜಿಲ್ಲಾ ಘಟಕದಿಂದ ನಗರದಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಯಿತು.
ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ ನೇತೃತ್ವದಲ್ಲಿ, ಪಕ್ಷದ ಮುಖಂಡರು, ನೂರಾರು ಕಾರ್ಯಕರ್ತರು, ನಗರದ ರಾಜಕುಮಾರ ಪಾರ್ಕ ಬಳಿಯ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಅಲ್ಲಿಂದ ‘ಗಾಂಧಿ ನಡಿಗೆ’ ಪಾದಯಾತ್ರೆಯ ಮೂಲಕ ಗಡಗಿ ಚನ್ನಪ್ಪ ವೃತ್ತದಲ್ಲಿನ ಗಾಂಧಿ ಭವನಕ್ಕೆ ತೆರಳಲಾಯಿತು. ಅಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಲಾಲ್ ಬಹಾದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.
ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ 29ನೇ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ‘ಗಾಂಧಿ ಭಾರತ್’ ಎಂಬ ಕಾರ್ಯಕ್ರಮವನ್ನು 1 ವರ್ಷದವರೆಗೆ ಆಚರಿಸಲಾಗುತ್ತಿದ್ದು. ಅದರ ಚಾಲನೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ, ಬೆಂಗಳೂರಿನ ಭಾರತ್ ಜೋಡೋ ಭವನದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ವೀಕ್ಷಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸದ ಈ. ತುಕಾರಾಮ್, ಶಾಸಕ ನಾರಾ ಭರತರೆಡ್ಡಿ, ಕಲ್ಲುಕಂಭ ಪಂಪಾಪತಿ, ಮೇಟಿ ಪಂಪನಗೌಡ, ಎ.ಮಾನಯ್ಯ, ಮೇಯರ್ ಮುಲ್ಲಂಗಿ ನಂದೀಶ್, ಬುಡಾ ಅಧ್ಯಕ್ಷ ಜೆ.ಎಸ್.ಆಂಜಿನೇಯ್ಯಲು, ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ವಿ.ಶಿವಯೋಗಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net