ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಮಳೆ

IMG20250818122749
Published on

ಜಿಲ್ಲೆಯಲ್ಲಿ ಮುಂದುವರೆದ ಮಳೆ

|| ನದಿಗಳ ನೀರಿನ ಮಟ್ಟ ಏರಿಕೆ

||ಕೆಳ ಹಂತದ ಸೇತುವೆಗಳು ಮುಳುಗಡೆ

ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ

ಮಹಾರಾಷ್ಟçದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿಕ್ಕೋಡಿ ಉಪ ವಿಭಾಗದ ನದಿಗಳ ನೀರಿನ ಮಟ್ಟ ಹೆಚ್ಚಳವಾಗಿದೆ.ಪರಿಣಾಮ ಕೆಳ ಹಂತದ ೮ ಸೇತುವೆಗಳು ಕಳೆದ ಎರಡು ತಿಂಗಳಿನಲ್ಲಿ ಐದನೇ ಬಾರಿಗೆ ಮುಳುಗಡೆಯಾಗಿವೆ.

ಜಿಲ್ಲೆಯಲ್ಲಿ ಹಾಗೂ ಮಹಾರಾಷ್ಟçದ ಕೋಯ್ನಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ, ವೇದಗಂಗಾ,ದೂಧಗಂಗಾ,ಹಿರಣ್ಯಕೇಶಿ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ನಿಪ್ಪಾಣಿ ತಾಲೂಕಿನಲ್ಲಿ ಹರಿಯುವ ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರು ಅಕ್ಕೋಳ-ಸಿದ್ನಾಳ, ಜತ್ರಾಟ-ಭೀವಶಿ,ಬಾರವಾಡ-ಕುನ್ನೂರ ಸೇತುವೆ ಹಾಗೂ ದೂಧಗಂಗಾ ನದಿಯ ಕಾರದಗಾ-ಭೋಜï,ಭೋಜವಾಡಿ-ಕುನ್ನೂರ  ಮತ್ತು ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ. ಇದರಿಂದ ೧೬ ಗ್ರಾಮಗಳ ಜನರು ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸುತ್ತಿದ್ದಾರೆ. ಕೃಷ್ಣಾ ನದಿಗೆ ಒಟ್ಟು  ೬೭ ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net