

ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಆ.27 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಘಂಟೆಯವರೆಗೆ ಎರಡನೇಯ ತ್ರೆಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವ್ಹಿ. ವಡಗಾಂವ ಉಪಕೇಂದ್ರದಿಂದ ಸರಬರಾಜು ಆಗುವ ಧಾಮನೆ, ಕುರುಬರಹಟ್ಟಿ, ದೇವಗ್ಯಾನಟ್ಟಿ, ಯರಮಾಳ, ಯಳ್ಳೂರ, ಸುಳಗಾ, ರಾಜಹಂಸಗಡ, ದೇಸೂರ, ನಂದಿಹಳ್ಳಿ, ಕೊಂಡಸಕೊಪ್ಪ, ಹಲಗಾ, ಬಸ್ತವಾಡ ಗ್ರಾಮಗಳಿಗೆ ಹಾಗೂ ಇನ್ನಿತರ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.