ಬೆಳಗಾವಿ ವರ್ತುಲ ರಸ್ತೆಯನ್ನು 3 ಹಂತದಲ್ಲಿ ಅಭಿವೃದ್ಧಿಪಡಿಸಲು ಸಿದ್ಧತೆ

Published on

ಬೆಳಗಾವಿ: ಕುಂದಾನಗರಿ ಜನತೆಯ ಮಹತ್ವಾಕಾಂಕ್ಷೆಯ ವರ್ತುಲ ರಸ್ತೆಯನ್ನು 3 ಹಂತದಲ್ಲಿ ಅಭಿವೃದ್ಧಿ ಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ವರ್ತುಲ(ರಿಂಗ್ ರೋಡ್) ರಸ್ತೆಗಾಗಿ ಭೂಸ್ವಾಧೀನ ಪಡಿಸಿಕೊಂಡಿರುವುದನ್ನು ಪ್ರಶ್ನಿಸಿ, ಕೆಲವು ರೈತರು ಹೈಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸುತ್ತಿದ್ದಾಗಲೇ ಈ ಮಾಹಿತಿ ಹೊರಬಿದ್ದಿದೆ. ಭೂಸ್ವಾಧೀನಕ್ಕಾಗಿ ಮತ್ತೊಂದು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ರೈತರು ಮುಂದಿನ 21 ದಿನಗಳಲ್ಲಿ ಶಿವಬಸವ ನಗರದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ಕಾಗದಪತ್ರಗಳನ್ನು ಸಲ್ಲಿಸಲು ಕೋರಲಾಗಿದೆ. ಪ್ರಾಧಿಕಾರದ ಮೂಲಗಳ ಪ್ರಕಾರ ಮೊದಲ ಹಂತದಲ್ಲಿ ಬಾಚಿ ಹಾಗೂ ಝಾಡಶಹಾಪುರ ಮಾರ್ಗದ ರಸ್ತೆಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net