

ಬಾಗಲಕೋಟೆ: ಬೆಳಗಾವಿಯಲ್ಲಿ ಡಿ.೨೬, ೨೭ ರಂದು ರಾಷ್ಟç ಮಟ್ಟದ ಕಾಂಗ್ರೆಸ್ ಅಧಿವೇಶನ ಏರ್ಪಡಿಸಲಾಗಿದೆ. ಕನ್ನಡಿಗರ, ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅಧಕ್ಷತೆಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೦೦ ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಽವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿ ವಹಿಸಿದ್ದರು. ಸದ್ಯ ನಡೆಯುತ್ತಿರುವ ಶತಮಾನೋತ್ಸವದ ಅಧ್ಯಕ್ಷತೆ ನಮ್ಮವರೇ ವಹಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಈಗಾಗಲೇ ಸಕಲ ಸಿದ್ಧತೆ ಆರಂಭಗೊAಡಿದೆ. ಎಐಸಿಸಿ, ಕೆಪಿಸಿಸಿ ಪದಾಽಕಾರಿಗಳು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಕೂಡಾ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಬೀಳಗಿ ಶಾಸಕ ಜೆ.ಟಿ.ಪಾಟೀಲ ಮಾತನಾಡಿ, ಬೆಳಗಾವಿಯಲ್ಲಿ ನಡೆಯುತ್ತಿರುವ ಅಽವೇಶನದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಅಂದಾಜು ೨,೫೦೦ ಜನರು ಪಾಲ್ಗೊಳ್ಳುತ್ತಿದ್ದು, ಅದಕ್ಕೆ ಬೇಕಾಗಿರುವ ಸಿದ್ಧತೆಗಳು ನಡೆದಿವೆ. ೨೫ ಸಾವಿರಾರು ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಡಿ.೨೬ ರಂದು ಬೆಳಗ್ಗೆ ೧೦ ಗಂಟೆಗೆ ಮಹಾತ್ಮ ಗಾಂಽ ಪುತ್ಥಳಿ ಅನಾವರಣಗೊಳ್ಳಲಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಮುಖಂಡ ವೆಂಕನಗೌಡ ಕಮಕೇರಿ ಇದ್ದರು.