

ಬಳ್ಳಾರಿ : ಬೆಳೆ ವಿಮೆಗೆ ಹೆಚ್ಚು ರೈತರು ನೋಂದಾಯಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ಎಡಿಸಿ ಮೊಹಮ್ಮದ್ ಝುಬೇರ್ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಅರಿವು ಮೂಡಿಸುವ ಹಾಗೂ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ಈ ವರ್ಷ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆ ಆಗುತ್ತಿದ್ದು ಈಗಾಗಲೇ ಕೃಷಿ ಚಟುವಟಿಕೆಗಳು ಬರದಿಂದ ಸಾಗುತ್ತಿವೆ. ಎಲ್ಲಾ ಅಧಿಕಾರಿಗಳು ಜಿಲ್ಲೆಯಲ್ಲಿ ಬೆಳೆ ವಿಮೆ ಕುರಿತು ವ್ಯಾಪಕ ಪ್ರಚಾರ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ಯೋಜನೆಯಡಿ ರೈತರನ್ನು ನೋಂದಾಯಿಸಿಕೊಳ್ಳುವಂತೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಸೂಚಿಸಿದರು.