ಬೆಳೆ ಹಾನಿಯಾದ ಎಲ್ಲ ರೈತರಿಗೂ ಪರಿಹಾರ

8SND-08
Published on

ಸಿಂಧನೂರು: ತಾಲೂಕಿನಲ್ಲಿ ಈ ಮೊದಲು ಬಿದ್ದ ಅಕಾಲಿಕ ಮಳೆಯಿಂದ ಆಗಿರುವ ನಷ್ಟದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಶೀಘ್ರವೇ ರೈತರ ಖಾತೆಗೆ ಪರಿಹಾರ ಜಮಾ ಆಗಲಿದೆ. ಎರಡನೆಯ ಬಾರಿ ಅಕಾಲಿಕ ಮಳೆಯಿಂದಾದ ನಷ್ಟದ ಸರ್ವೇ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ತಿಳಿಸಿದರು.

ಮೂಡಲಗಿರಿ ಕ್ಯಾಂಪ್‌ನಲ್ಲಿ ಅಕಾಲಿಕ ಮಳೆಯಿಂದಾದ ಭತ್ತದ ಬೆಳೆ ಹಾನಿ ವೀಕ್ಷಿಸಿ ಭಾನುವಾರ ಮಾತನಾಡಿದರು. ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ 23 ಸಾವಿರ ಎಕರೆ ಪ್ರದೇಶದಲ್ಲಿ ಭತ್ತ ನಷ್ಟವಾಗಿರುವ ವರದಿಯನ್ನು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದೆ. ನಷ್ಟ ಅನುಭವಿಸಿರುವ ಎಲ್ಲ ರೈತರಿಗೂ ಪರಿಹಾರ ನೀಡಲಾಗುವುದು. ಸೂಚನೆ ನೀಡಿದ ಕೂಡಲೇ ಅಧಿಕಾರಿಗಳು ಮಿಂಚಿನ ಸರ್ವೇ ನಡೆಸಿ ಹಾನಿ ವರದಿ ಸಲ್ಲಿಸಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net