

ಚಿತ್ರದುರ್ಗ: ಪ್ರಸಕ್ತ ಸಾಲಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಕೆ, ದಾಳಿಂಬೆ ಮತ್ತು ಮಾವು ಬೆಳೆಗಳ ಬೆಳೆವಿಮೆ ನೊಂದಣಿ ಅವಧಿಯನ್ನು ಆ.16ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಥವಾ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.