ಬೆಳೆಹಾನಿ ಪ್ರದೇಶಗಳಿಗೆ ಶಾಸಕ ಬಸವಂತಪ್ಪ ಭೇಟಿ- ಪರಿಶೀಲನೆ

IMG-20230831-WA0022.jpg
Published on

ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಸಂಪೂರ್ಣ ಹಾಳಾಗಿರುವ ಪ್ರದೇಶಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಮಾಯಕೊಂಡ ಹಾಗೂ ಇತರ ಗ್ರಾಮಗಳಿಗೆ ಉಪತಹಸೀಲ್ದಾರ್ ಹಾಲೇಶಪ್ಪ, ಕೃಷಿ ಅಧಿಕಾರಿಗಳೊಂದಿಗೆ ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕರು, ಮುಂಗಾರು ಆರಂಭದಲ್ಲಿಯೇ ಮಳೆ ಅಭಾವ ರೈತರ ನಿದ್ದೆಗೆಡಿಸಿತ್ತು. ಬಳಿಕ ಬಂದ ಮಳೆ ರೈತರಲ್ಲಿ ಮಂದಹಾಸ ಮೂಡಿಸಿ ಬಿತ್ತನೆಗೆ ಕಾರಣವಾಗಿತ್ತು. ಆದರೆ ಫಸಲು ಬೆಳೆಯುವ ಸಂದರ್ಭದಲ್ಲಿ ಮಳೆ ಕೈಕೊಟ್ಟಿದ್ದು, ರೈತರನ್ನು ಆತಂಕಕ್ಕೆ ದೂಡಿದೆ.

ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರೊಂದಿಗೆ ಚರ್ಚಿಸಿ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಮಳೆ ಆಶ್ರಿತ ಪ್ರದೇಶವನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ಹಾಲೇಶಪ್ಪ, ಕೃಷಿ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರಾದ ಬಿ.ಟಿ.ಹನುಮಂತಪ್ಪ, ರುದ್ರೇಶ್, ಗೋಪಾಲ್, ಜಗದೀಶ್, ಮಂಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net