

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಗ್ರಾಮದಲ್ಲಿ ಸೋಮವಾರ ಬಸವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಗ್ರಾಮದ ಬಂಡಿಗೆರೆ ಮಹದೇಶ್ವರ ದೇವಸ್ಥಾನದ ಬಳಿ ಅಲಂಕೃತ ವಾಹನಗಳಲ್ಲಿ ಬಸವೇಶ್ವರರ ಭಾವಚಿತ್ರಗಳನ್ನು ಇರಿಸಿ ಮಂಗಳವಾದ್ಯಗಳು, ಜನಪದ ಕಲಾ ತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಸೋಮಹಳ್ಳಿ ಮಠಾಧ್ಯಕ್ಷ ಶ್ರೀ ಸಿದ್ದಮಲ್ಲ ಸ್ವಾಮೀಜಿ, ಮಾದಾಪಟ್ಟಣ ಮಠಾಧ್ಯಕ್ಷ ಶ್ರೀ ತೋಂಟದಾರ್ಯ ಸ್ವಾಮೀಜಿ, ಕುರುಬರಹುಂಡಿ ಮಠದ ಶ್ರೀ ಇಮ್ಮಡಿ ಮಹಾಂತ ಸ್ವಾಮೀಜಿ, ಕಬ್ಬಳ್ಳಿ ಮಠದ ಶ್ರೀ ಗುರುಸಿದ್ದ ಸ್ವಾಮೀಜಿ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ತಾಪಂ ಮಾಜಿ ಅಧ್ಯಕ್ಷ ಎಸ್.ಎಸ್.ಮಧುಶಂಕರ್ ಸೇರಿದಂತೆ ಹಲವರು ಇದ್ದರು.