ಬೇಡ ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಶಿಷ್ಯವೇತನ

scholarship 27 JAN 20
Published on

ಚಿತ್ರದುರ್ಗ:ಈ ಬಾರಿಯ ಎಸ್ಸೆಸ್ಸೆಲ್ಸಿಯಲ್ಲಿ ಶೇ.90ಕ್ಕಿಂತ ಅಧಿಕ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚಿನ ಅಂಕಗಳೊಂ ದಿಗೆ ಉತ್ತೀರ್ಣರಾಗಿರುವ ಜಿಲ್ಲಾ ಬೇಡ ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಆರ್ಥಿಕವಾಗಿ ಹಿಂದುಳಿದ ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು. ಅರ್ಜಿ ಸಲ್ಲಿಕೆ ಅವಧಿಯನ್ನು ಜೂ.30ರವರೆಗೆ ವಿಸ್ತರಿಸಲಾಗಿದೆ. ಈ ಮುನ್ನ ಅರ್ಜಿ ಸಲ್ಲಿಕೆ ಅವಧಿ ಮೇ 30 ಕೊನೆಯ ದಿನವಾಗಿತ್ತು ಎಂದು ಸಮಾಜದ ಜಿಲ್ಲಾ ಪ್ರಧಾನ ಕಾರ‌್ಯದರ್ಶಿ ಎಸ್.ಷಡಾಕ್ಷರಯ್ಯ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9449681797 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net