ಬೇಡಿಕೆ ಈಡೇರಿಕೆಗೆ ಆಗ್ರಹ

28Ravig1
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕೂಲಿ ಕಾರ್ಮಿಕರು ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು.
Published on

ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರಸ್ತುತವಾಗಿ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲ ಕಾನೂನುಗಳನ್ನು ತಿದ್ದುಪಡಿಗೊಳಿಸಿದೆ. ಈ ಕಾನೂನುಗಳಿಂದ ಕೂಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಆ್ಯಪ್ ಮೂಲಕ ದಿನಕ್ಕೆ ಎರಡು ಬಾರಿ ಹಾಜರಾತಿ ನೀಡುವ ಯೋಜನೆಯನ್ನು ಕೈಬಿಟ್ಟು ಹಾಲಿ ಪದ್ಧತಿಯನ್ನು ಮುಂದುವರಿಸಬೇಕು ಎಂದು ಪ್ರತಿಭಟನಾಕಾರರು ಕೋರಿದರು. ದಿಲೀಪ ಕಾಮತ, ಅಶೋಕ ಹೆರೇಕರ, ಅನಿತಾ ಬೆಳಗಾವಕರ, ಗೌರವ್ವ ಬೇವಿನಕಟ್ಟಿ, ವನಿತಾ ಪಾಟೀಲ, ಪದ್ಮಾ ಬಸರಿಕಟ್ಟಿ, ಅಜ್ಜಪ್ಪ ಕುಂಬರಗಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net