ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಧರಣಿ

22sunti02..
ಸುಂಟಿಕೊಪ್ಪ ಗ್ರೇಡ್ ಒನ್ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದರು.
Published on

ಸುಂಟಿಕೊಪ್ಪ: ಸುಂಟಿಕೊಪ್ಪ ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೆ.22 ರ ಸೋಮವಾರದಂದು ಸುಂಟಿಕೊಪ್ಪ ಗ್ರೇಡ್1 ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಗ್ರಾಮ ಪಂಚಾಯಿತಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ(ಸಿಐಟಿಯು)ದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ನೇತೃತ್ವದಲ್ಲಿ ಪೌರಕಾರ್ಮಿಕರು, ಸ್ವಚ್ಛತಾಗಾರರು ಹಾಗೂ ನೀರುಗಂಟಿಗಳು ಧರಣಿ ನಡೆಸಿದರು.

ಈ ಸಂದರ್ಭ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಅಧಿಕಾರ ಜಿಲ್ಲಾ ಪಂಚಾಯಿತಿ ಸಿಇಒಗೆ ಇದೆ. ಆದರೆ ವಿಳಂಬ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಪೌರ ಕಾರ್ಮಿಕರು ತಮ್ಮ ಸೇವೆ ಅನುಮೋದನೆ ಹಾಗೂ ಕನಿಷ್ಟವೇತನಕ್ಕೆ ಆಗ್ರಹಿಸಿ ಒಂದು ವೇಳೆ ಅನುಮೋದನೆ ದೊರೆಯದಿದ್ದಲ್ಲಿ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಮುಂದಾಗಲಿದ್ದೇವೆ ಎಂದು ಭರತ್ ಎಚ್ಚರಿಕೆ ನೀಡಿದರು.

ಇದೇ ವೇಳೆ ತಮ್ಮ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನೀಲ್ ಕುಮಾರ್, ಪೌರ ಕಾರ್ಮಿಕರ ಬೇಡಿಕೆಗಳ ಬಗ್ಗೆ ಈ ಆಡಳಿತ ಮಂಡಳಿ ಸಂಪೂರ್ಣ ಸಹಮತವಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಲೋಪ ಉಂಟಾಗಿದ್ದು, ಅದನ್ನು ಸರಿಪಡಿಸಲು ಮನವಿಯನ್ನು ಸಂಬಂಧಿಸಿದವರಿಗೆ ಕಳುಹಿಸಿ ಶೀಘ್ರ ಕ್ರಮವಹಿಸುವಂತೆ ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದರು.

ಧರಣಿಯಲ್ಲಿ ರಂಗಸ್ವಾಮಿ, ವೀರಭದ್ರ, ಮಣಿಕಂಠ, ಮುನಿಸ್ವಾಮಿ, ರಾಮಚಂದ್ರ, ವಿಶ್ವ, ರವಿ, ರಾಜ, ಮುರುಗೇಶ್, ರಮೇಶ, ಸಣ್ಣ ಸೇರಿದಂತೆ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net