ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಕ್ರಮ

Press day
ಯಳಂದೂರು ಪಟ್ಟಣದ ಶ್ರೀ ಶಂಕರ ಸಭಾ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.
Published on

ಯಳಂದೂರು: ಪತ್ರಕರ್ತರಿಗೆ ಸಮಾಜವನ್ನು ಸ್ವಸ್ಥ ಮಾಡುವ ನಿಟ್ಟಿನಲ್ಲಿ ಮಹತ್ವದ ಜವಾಬ್ದಾರಿಯಿದೆ. ಹಾಗಾಗಿ ವೃತ್ತ್ತಿಯಲ್ಲಿ ಬದ್ಧತ್ನೆ ಕಾಯ್ದುಕೊಳ್ಳಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಸಲಹೆ ನೀಡಿದರು.

ಪಟ್ಟಣದ ಅಗ್ರಹಾರ ಬೀದಿಯಲ್ಲಿರುವ ಶ್ರೀ ಶಂಕರಸಭಾ ಭವನದಲ್ಲಿ ಶುಕ್ರವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ತಾಲೂಕು ಪತ್ರಕರ್ತರ ಸಂಘ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ಅನೇಕ ಗಣ್ಯರನ್ನು ಸನ್ಮಾನಿಸಿರುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲೂ ಪತ್ರಿಕಾಭವನವಿದ್ದು ಇಲ್ಲಿ ಭವನಕ್ಕೆ ಖಾಲಿ ನಿವೇಶನದ ಬೇಡಿಕೆಯನ್ನು ಇಲ್ಲಿನ ಅಧ್ಯಕ್ಷರು ಮುಂದಿಟ್ಟಿದ್ದಾರೆ. ಇದಕ್ಕೆ ಪೂರಕವಾಗಿ ನಾನು ಪಪಂ ಮುಖ್ಯಾಧಿಕಾರಿಗಳ ಜೊತೆ ಚರ್ಚಿಸಿ ನಿವೇಶನ ನೀಡಲು ಕ್ರಮ ವಹಿಸುವೆ. ಅಲ್ಲದೆ, ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ, ತಾಲೂಕು ಪತ್ರಕರ್ತರಿಗೆ ನಿವೇಶನ ನೀಡುವುದು, ಉಚಿತ ಬಸ್ ಪಾಸ್ ಸೇರಿದಂತೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ಪತ್ರಕರ್ತರು ನನ್ನ ಗಮನಕ್ಕೆ ತಂದಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕ್ರಮ ಕೈಗೊಳ್ಳುವೆ ಎಂದು ಭರವಸೆ ನೀಡಿದರು.

ಸಾಧಕರಿಗೆ ಸನ್ಮಾನ: ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದೇವರಾಜು ಕಪ್ಪಸೋಗೆ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೋಹನ್, ಶಿವಕುಮಾರ್, ಕಿನಕಹಳ್ಳಿ ರಾಚಯ್ಯ, ಜ್ಯೋತಿ, ಬಂಡಹಳ್ಳಿ ಮಹೇಶ್, ಲಕ್ಷ್ಮಣ, ರೇವಣ್ಣ, ಕೆಸ್ತೂರು ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.

ಪತ್ರಿಕಾ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಪಡೆದ ಆರೋಗ್ಯ ಇಲಾಖೆ ಹಾಗೂ ದ್ವಿತೀಯ ಬಹುಮಾನ ಪಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾಪಟುಗಳಿಗೆ ಟ್ರೋಫಿ ನೀಡಲಾಯಿತು. ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗೌಡಹಳ್ಳಿ ಮಹೇಶ್, ರಾಜ್ಯ ಸಮಿತಿ ಸದಸ್ಯ ಗೂಳೀಪುರ ನಂದೀಶ್, ತಹಸೀಲ್ದಾರ್ ಜಯಪ್ರಕಾಶ್, ವೈದ್ಯಾಧಿಕಾರಿ ಡಾ.ಶ್ರೀಧರ್, ಮುಖ್ಯಾಧಿಕಾರಿ ರವಿಕೀರ್ತಿ ಮಾತನಾಡಿದರು. ಬಿಇಒ ಕೆ.ಕಾಂತರಾಜು, ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್, ಪಪಂ ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ್, ಮಂಜು, ಲಕ್ಷ್ಮಿಮಲ್ಲು, ಬಿ.ರವಿ, ಸುಶೀಲಾ ಪ್ರಕಾಶ್ ಮುಖಂಡರಾದ ವಾಲೆ ಮಹದೇವ, ಜೆ. ಶ್ರೀನಿವಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net