ಬೇಡಿಕೆ ಈಡೇರಿಕೆಗೆ ಮುಷ್ಕರದಲ್ಲಿ ಪಾಳ್ಗೊಳ್ಳಿ

Shivaraj Kaplapure
Published on

ಬೀದರ್: ಬಹು ದಿನಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಕಪಲಾಪುರೆ ಮನವಿ ಮಾಡಿದ್ದಾರೆ.
ವೇತನ, ಭತ್ಯೆ ಪರಿಷ್ಕರಣೆ ಹಾಗೂ ಹಳೆಯ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ನೌಕರರ ಸಂಘವು ಮಾ. 1 ರಿಂದ ನಡೆಸಲು ನಿರ್ಧರಿಸಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಘದ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.
ಎನ್.ಪಿ.ಎಸ್ ರದ್ದತಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಬರಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸಂಘ ಅನಿವಾರ್ಯವಾಗಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net