ಬೇಡಿಕೆ ಈಡೇರಿಸಿದ ಬಳಿಕ ಸಿಎಂ ಬೀದರ್ ಗೆ ಬರಲಿ

Mallikarjun swamy
Published on

ಬೀದರ್: ಜಿಲ್ಲೆಯ ರೈತರ ಜೀವನಾಡಿಯಾದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್ಸೆಸ್ಕೆ)ಗೆ ಕಬ್ಬು ಸಾಗಿಸಿದ ರೈತರಿಗೆ ಬಾಕಿ ಹಣ ಪಾವತಿ ಸೇರಿ ರೈತರ ವಿವಿಧ ಬೇಡಿಕೆ ಈಡೇರಿಸಿದ ನಂತರ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಆಗಮಿಸಬೇಕು. ನಿರ್ಲಕ್ಷ್ಯ ಮಾಡಿದರೆ ಕಪ್ಪು ಪಟ್ಟಿ ಪ್ರದರ್ಶಿಸುವುದಾಗಿ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಎಚ್ಚರಿಸಿದ್ದಾರೆ.

ಪಕ್ಷದ ಕಾರ್ಯಕ್ರಮ ನಿಮಿತ್ತ 18ರಂದು ಔರಾದ್ ಹಾಗೂ ಹುಮನಾಬಾದ್ ಗೆ ಸಿಎಂ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗಮಿಸುತ್ತಿದ್ದಾರೆ. ಜಿಲ್ಲೆಗೆ ಆಗಮಿಸುವ ಮುನ್ನ ರೈತರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಬಿಎಸ್ಸೆಸ್ಕೆಗೆ ಕಬ್ಬು ಸಾಗಿಸಿದ ರೈತರು ಒಂದು ವರ್ಷದಿಂದ ಹಣಕ್ಕಾಗಿ ಪರದಾಡಬೇಕಾಗಿದೆ. ಭರವಸೆಯಲ್ಲಿ ಸರ್ಕಾರ ಕಾಲಕಳೆಯುತ್ತಿದೆ. ಈ ಹಿಂದೆ ಸಾಲ ಮನ್ನಾ ಹಾಗೂ ಎಂಟಿ ಸಾಲದ ಮೇಲಿನ ಬಡ್ಡಿ ಮನ್ನಾ ವೇಳೆ ಕೆಲ ತಾಂತ್ರಿಕ ಕಾರಣಗಳಿಂದ ರೈತರಿಗೆ ಲಾಭ ಸಿಕ್ಕಿಲ್ಲ. ಈ ಬಗ್ಗೆ ಪರಿಶೀಲಿಸಿ ಎಲ್ಲ ರೈತರಿಗೆ ಸಾಲ ಮತ್ತು ಬಡ್ಡಿ ಮನ್ನಾ ಲಾಭ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net