ಬೇಡಿಕೆ ಈಡೇರುವತನಕ ಹೋರಾಟ

24 yelandur 01
ಯಳಂದೂರು ಪಟ್ಟಣ ತಹಸೀಲ್ದಾರ್ ಕಚೇರಿ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಭಿತ್ತಿಪತ್ರವನ್ನು ನೀಡಿ ಬೆಂಬಲಿಸಬೇಕೆಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಎಂ.ಮುಂಜುನಾಥ್, ಕಾರ್ಯದರ್ಶಿ ಮಹೇಶ್, ನಂಜುಂಡ ಸೇರಿದಂತೆ ಇತರು ಹಾಜರಿದ್ದರು.
Published on

ಯಳಂದೂರು: ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.1 ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವೈ.ಎಂ.ಮಂಜುನಾಥ್ ತಿಳಿಸಿದರು.
ಪಟ್ಟಣದಲ್ಲಿರುವ ವಿವಿಧ ಸರ್ಕಾರಿ ಕಚೇರಿಗಳಿಗೆ ತೆರಳಿ ಸಂಘದ ಮನವಿ ಪತ್ರ ನೀಡಿ ಮಾತನಾಡಿದ ಅವರು, ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ಜಾರಿಗೊಳಿಸಬೇಕು. ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸುವ ತನಕ ಹೋರಾಟ ನಿಲ್ಲುವುದಿಲ್ಲ ಎಂದರು.
ಸಂಘದ ಪದಾಧಿಕಾರಿಗಳಾದ ಅಮ್ಮನಪುರ ಮಹೇಶ್, ನಂಜುಂಡ, ಖಜಾಂಚಿ ರಮೇಶ್, ಗೋವಿಂದ, ಸೋಮಣ್ಣ, ನಾಗರಾಜು, ನಂಜುಂಡಸ್ವಾಮಿ, ರುದ್ರಯ್ಯ, ದೇವನಾಯಕ, ನದೀಮ, ಮಾನಸಾ, ಮಾದಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net