ಬೇಲೂರಿನಲ್ಲಿ ಮತದಾರರ ನೋಂದಣಿ ಜಾಗೃತಿ

17blrp1
Published on

ಬೇಲೂರು : ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮತದಾರರ ನೋಂದಣಿ ಜಾಗೃತಿ ಅಭಿಯಾನದ ಅಂಗವಾಗಿ ತಾಲೂಕು ಆಡಳಿತದಿಂದ ಶುಕ್ರವಾರ ಬೇಲೂರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸುನೀತಾ ಮಾತನಾಡಿ, ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯ ಮತದಾನ ಮಾಡಬೇಕೆಂಬ ಉದ್ದೇಶದಿಂದ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ತಾಲೂಕಿನ ಅರೇಹಳ್ಳಿ, ಬಂಟೇನಹಳ್ಳಿ, ನಾರ್ವೆಪೇಟೆ, ಹಗರೆ ಮತ್ತು ಪುರಸಭೆ ವ್ಯಾಪ್ತಿಯ ಮೂರು ಮತಗಟ್ಟೆಯಲ್ಲಿ ಶೇ.65ಕ್ಕಿಂತ ಕಡಿಮೆ ಮತದಾನವಾಗಿದೆ. ಅಂತಹ ಕಡೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಗ್ರೇಡ್ 2 ತಹಸೀಲ್ದಾರ್ ಅಶೋಕ್ ಕುಮಾರ್, ಶಿರಸ್ತೇದಾರ್‌ಗಳಾದ ಮೋಹನ್‌ಕುಮಾರ್, ಮಂಜುನಾಥ್, ನೋಡಲ್ ಅಧಿಕಾರಿ ಶಿವಮರಿಯಪ್ಪ, ಜೂನಿಯರ್ ಕಾಲೇಜು ಉಪ ಪ್ರಾಂಶುಪಾಲ ಚಂದ್ರಶೇಖರ್, ತಾಪಂ ಕಚೇರಿ ಪ್ರದೀಪ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net