ಬೈಕ್ ಅಫಘಾತದಲ್ಲಿ ಸವಾರ ಸಾವು

Bike Accident_2
Published on

ಮದ್ದೂರು: ಪಟ್ಟಣದ ಶಿವಪುರದ ಬಳಿ ಮಂಗಳವಾರ ಸಂಜೆ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾರೆ.

ತಾಲೂಕಿನ ಸೋಮನಹಳ್ಳಿ ರಮೇಶ್ ಪುತ್ರ ಅಮಿತ್‌ಗೌಡ (17) ಮೃತಪಟ್ಟ ಬೈಕ್ ಸವಾರ. ಅಮಿತ್ ಕಾರ್ಯ ನಿಮಿತ್ತ ಸ್ವಗ್ರಾಮ ಸೋಮನಹಳ್ಳಿಯಿಂದ ಮದ್ದೂರಿಗೆ ಬೈಕ್‌ನಲ್ಲಿ ಬರುತ್ತಿದ್ದರು. ಹಳೇ ಮೈಸೂರು-ಬೆಂಗಳೂರು ಹೆದ್ದಾರಿಯ ಶಿಂಷಾ ನದಿ ಸೇತುವೆ ಬಳಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅಮಿತ್‌ಗೆ ಮದ್ದೂರು ಸರ್ಕಾರಿ ಆಸ್ಪತ್ರೆ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಕೊನೆಯುಸಿರೆಳೆದಿದ್ದಾರೆ. ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net