ಬೈಕ್ ಕಳವು ಮಾಡುತ್ತಿದ್ದ ಬಾಲಕರು

U333ntitled
Published on

ಮೈಸೂರು: ನಗರ ಸೇರಿದಂತೆ ವಿವಿಧೆಡೆ ದ್ವಿಚಕ್ರ ವಾಹನ ಕಳವು ಮಾಡಿದ್ದ ಮೂವರು ಬಾಲಕರನ್ನು ವಶಕ್ಕೆ ಪಡೆದಿರುವ ವಿವಿ ಪುರಂ ಪೊಲೀಸರು 3.25 ಲಕ್ಷ ರೂ. ಮೌಲ್ಯದ 5 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿಗಳು ಕಾನೂನು ಸಂಘರ್ಷಕ್ಕೆ ಒಳಪಟ್ಟಿರುವ ಬಾಲಕರಾಗಿದ್ದಾರೆ.

ಸೆ.17ರಂದು ಯಾದವಗಿರಿ ಬಳಿ ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಬಾಲಕರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಅವರು ನೀಡಿದ ಉತ್ತರದಿಂದ ಅನುಮಾನಗೊಂಡು ವಿಚಾರಣೆಗೆ ಒಳಪಡಿಸಿದಾಗ ವಿ.ವಿ.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು, ನರಸಿಂಹರಾಜ ಠಾಣೆ ವ್ಯಾಪ್ತಿಯಲ್ಲಿ ಎರಡು, ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ಒಂದು ಮತ್ತು ಹಾಸನ ಜಿಲ್ಲೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಬೈಕ್ ಕಳವು ಮಾಡಿರುವ ಬಗ್ಗೆ ಒಪ್ಪಿಸಿಕೊಂಡಿದ್ದು, ಮೂವರನ್ನೂ ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net