ಬೈಕ್ ಕಳ್ಳನ ಬಂಧನ

27blrp4
Published on

ಬೇಲೂರು: ತಾಲೂಕಿನ ಡನಾಯ್ಕನಹಳ್ಳಿ ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬೇಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪದ ಗುಡ್ಡದಹಳ್ಳಿ ಗ್ರಾಮದ ನಿವಾಸಿ ಖಾಸಿಂ ಬಂಧಿತ ಆರೋಪಿ. ಕಳವು ಮಾಡಿದ್ದ ಬೈಕನ್ನು ವಶಪಡಿಸಿಕೊಂಡಿರುವ ಪೊಲೀಸರು, ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆಗಸ್ಟ್ 24 ರಂದು ರಾತ್ರಿ ಗ್ರಾಮದ ಮಹಮದ್ ಮುಸವೀರ್ ಎಂಬುವರು ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನದ ಬಗ್ಗೆ ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೇಲೂರು ಠಾಣೆ ಇನ್ಸ್‌ಪೆಕ್ಟರ್ ಕಿರಣ್ ಕುಮಾರ್ ನೇತೃತ್ವದಲ್ಲಿ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net