ಬೈಕ್ ಕಳ್ಳನ ಬಂಧನ, ದ್ವಿಚಕ್ರ ವಾಹನಗಳನ್ನು ವಶಕ್ಕೆ

bikes
Published on

ರೋಣ: ಹಲವಾರು ವರ್ಷಗಳಿಂದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳವು ಮಾಡುತ್ತಿದ್ದವ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನಿಂದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಪಟ್ಟಣದ ಬಸ್ ನಿಲ್ದಾಣದ ಕ್ಯಾಂಟೀನ್ ಹಿಂಬದಿ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಏ. 3ರಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನತ್ತಿದ ಪೊಲೀಸರು ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡಿದ್ದ ತಾಲೂಕಿನ ಗುಜಮಾಗಡಿ ಗ್ರಾಮದ ಈಶ್ವರಪ್ಪ ತಳವಗೇರಿ ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿ ಈಶ್ವರಪ್ಪ ತಳವಗೇರಿ ಏಳೆಂಟು ವರ್ಷಗಳಿಂದ ಬೈಕ್ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದು, ಗದಗ ಜಿಲ್ಲೆಯಲ್ಲಿ 5, ಕೊಪ್ಪಳ ಜಿಲ್ಲೆಯಲ್ಲಿ 20, ಬಾಗಲಕೋಟೆ ಜಿಲ್ಲೆಯಲ್ಲಿ 6, ಬೆಳಗಾವಿ ಜಿಲ್ಲೆಯಲ್ಲಿ 1 ಸೇರಿ ಒಟ್ಟು 32 ಬೈಕ್ ಕಳ್ಳತನ ಮಾಡಿದ್ದಾನೆ. ಪೊಲೀಸರು ಆ ಎಲ್ಲ ದ್ವಿಚಕ್ರ ವಾಹನಗಳನ್ನೂ ಜಪ್ತಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net