ತುಮಕೂರು: ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆಗೆ ಅತಿವೇಗವಾಗಿ ದ್ವಿಚಕ್ರ ವಾಹನ ಸವಾರರು ಗುದ್ದಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ಟನೆ ಸೋಮವಾರ ರಾತ್ರಿ ನಗರದಲ್ಲಿ ನಡೆದಿದೆ. ಬೈಕ್ ಸವಾರರು ಮಾರಕಾಸ್ತ್ರ ಹೊಂದಿದ್ದು ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನಗರದ ಬಾರ್ಲೈನ್ ರಸ್ತೆಯಲ್ಲಿ ಸೋಮವಾರ ರಾತ್ರಿ ರಸ್ತೆ ದಾಟುತ್ತಿದ್ದ ನಿಲೂರ್ (26)ಗೆ ಬೈಕ್ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಗೆ 4 ಹಾಗೂ 6 ವರ್ಷದ ಇಬ್ಬರು ಮಕ್ಕಳಿದ್ದಾರೆ. ಬೈಕ್ ಸವಾರರಲ್ಲಿ ಓರ್ವ ಗಾಯಗೊಂಡಿದ್ದು ಮತ್ತೊರ್ವ ಪರಾರಿಯಾಗಿದ್ದಾನೆ. ಗಾಯಾಳುವನ್ನು ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.