ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು

19 mlv 1 ರಾಜು(70).
Published on

ಮಳವಳ್ಳಿ: ತಾಲೂಕಿನ ಹಿಟ್ಟನಹಳ್ಳಿ ಬಳಿ ಶುಕ್ರವಾರ ರಾತ್ರಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿದ್ದಾರೆ.


ಗ್ರಾಮದ ನಿವಾಸಿ ರಾಜು(70) ಮೃತರು. ಇವರು ಶುಕ್ರವಾರ ರಾತ್ರಿ ಹಿಟ್ಟನಹಳ್ಳಿ ಬಳಿ ರಸ್ತೆ ದಾಟುತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಸಹ ತೀವ್ರವಾಗಿ ಗಾಯಗೊಂಡು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net