ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

accident raichur
Published on

ಮೈಸೂರು: ಆಲನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ದ್ವಿಚಕ್ರ ವಾಹನವು ಗುರುವಾರ ಡಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡ ಪಾದಚಾರಿ ಶುಕ್ರವಾರ ಮೃತಪಟ್ಟಿದ್ದಾರೆ.

ಮೈಸೂರು ತಾಲೂಕಿನ ವರುಣ ಹೋಬಳಿಯ ದಂಡಿಕೆರೆ ಗ್ರಾಮದ ದ್ಯಾಯಾನಟ್ಟಿ ಮಹದೇವಪ್ಪ (47) ಮೃತ ವ್ಯಕ್ತಿ.

ಅವರು ಆಲನಹಳ್ಳಿ ಬಳಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸಿದ್ಧಾರ್ಥನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net