ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

Published on

ಆನೇಕಲ್ : ಬನ್ನೇರುಘಟ್ಟ ಮುಖ್ಯರಸ್ತೆಯ ಕುಂಬಾರನಹಳ್ಳಿ ಗೇಟ್ ಬಳಿ ಭಾನುವಾರ ದ್ವಿಚಕ್ರವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಕುಂಬಾರನಹಳ್ಳಿ ಗೇಟ್ ನಿವಾಸಿ ಮುನಿರಾಮಯ್ಯ(58) ಮೃತ. ಬೈಕ್ ಸವಾರ ಇಮಾನ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಜಿಗಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಬೈಕ್ ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net