ಬೈಕ್ ಡಿಕ್ಕಿಯಾಗಿ ಸವಾರ ಸಾವು,

24 mlv 1 ಶಿವಲಿಂಗಯ್ಯ(43)
ಮೃತ ಶಿವಲಿಂಗಯ್ಯ.
Published on

ಮಳವಳ್ಳಿ: ತಾಲೂಕಿನ ಬಂಡೂರು ಸಮೀಪ ಭಾನುವಾರ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಬೈಕ್ ಸವಾರ ಮೃತಪಟ್ಟು ಮತ್ತೊಬ್ಬ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ.
ದಡದಪುರ ಗ್ರಾಮದ ಲೇ.ದೊಣ್ಣೆಲಿಂಗೇಗೌಡ ರ ಪುತ್ರ ಶಿವಲಿಂಗಯ್ಯ(43) ಮೃತರು. ಮತ್ತೊಂದು ಬೈಕ್ ಸವಾರ ದುಗ್ಗನಹಳ್ಳಿ ಗ್ರಾಮದ ಶಶಾಂಕ್ ತೀವ್ರವಾಗಿ ಗಾಯಗೊಂಡಿದ್ದಾರೆ.

ಮಳವಳ್ಳಿ ಪಟ್ಟಣದಿಂದ ಸ್ವಗ್ರಾಮ ದಡದಪುರಕ್ಕೆ ಶಿವಲಿಂಗಯ್ಯ ತೆರಳುತ್ತಿದ್ದ ವೇಳೆ ಎದುರಿನಿಂದ ಬೈಕ್‌ನಲ್ಲಿ ವೇಗವಾಗಿ ಬಂದ ಶಶಾಂಕ್ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಸವಾರರನ್ನು ಸ್ಥಳೀಯರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ತಲೆಯ ಭಾಗಕ್ಕೆ ಪೆಟ್ಟುಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಶಿವಲಿಂಗಯ್ಯ ಅವರನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net