ಬೈಕ್ ಡಿಕ್ಕಿಯಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್

bus
Published on

ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶುಕ್ರವಾರ ಮಧ್ಯಾಹ್ನ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ.

ಬೈಕೊಂದು ಬಸ್‌ಗೆ ಡಿಕ್ಕಿ ಹೊಡೆದಿದ್ದು, ಈ ಸಂದರ್ಭ ಬೆಂಕಿ ಕಾಣಿಸಿಕೊಂಡಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಇಳಿದು ಹೋಗಿದ್ದಾರೆ. ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಅಗ್ನಿಶಾಮಕದಳ ಆಗಮಿಸಿ ಬೆಂಕಿ ಶಮನಗೊಳಿಸಿದೆ. ಬಸ್ ಬಹುತೇಕ ಸುಟ್ಟು ಹೋಗಿದೆ.

ಬಸ್ ಹೊತ್ತಿ ಉರಿದ ಕಾರಣ ರಸ್ತೆಯಲ್ಲಿ ಅರ್ಧ ತಾಸು ವಾಹನ ಸಂಚಾರ ಸ್ಥಗಿತಗೊಂಡಿತ್ತು. ದುರ್ಘಟನೆಯಲ್ಲಿ ಬೈಕ್ ಸವಾರನಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿ ಬಸ್ ಉರಿಯುವುದನ್ನು ವೀಕ್ಷಿಸಿ, ಮೊಬೈಲ್‌ಗಳಲ್ಲಿ ವಿಡಿಯೋ, ಫೋಟೋ ತೆಗೆಯುತ್ತಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net