ಬೈಕ್ ನಿಯಂತ್ರಣ ತಪ್ಪಿ ಬಿದ್ದು ಸವಾರ ಸಾವು

accident
Published on

ಹಾಸನ :  ಅತಿವೇಗವಾಗಿ ಬೈಕಿನಲ್ಲಿ ಬಂದ ಸವಾರ ಮುಂದೆ ಇದ್ದ ಗುಂಡಿಯನ್ನು ಗಮನಿಸದೆ ಗುಂಡಿಗೆ ಇಳಿಸಿದ ಪರಿಣಾಮ ನಿಯಂತ್ರಣ ತಪ್ಪಿ ಬಿದ್ದು ಸವಾರ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ಪಟ್ಟಣದ ರೈಲ್ವೆ ಬ್ರಿಡ್ಜ್ ಹತ್ತಿರ ನಡೆದಿದೆ.

ಚನ್ನರಾಯಪಟ್ಟಣ ತಾಲ್ಲೂಕು, ನುಗ್ಗೇಹಳ್ಳಿ ಹೋಬಳಿ, ಮರಿಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಮೂಡಲಯ್ಯ (58) ಮೃತ ವ್ಯಕ್ತಿ.

ಏ.6ರಂದು ಮೂಡಲಯ್ಯ ತನ್ನ ಬೈಕಿನಲ್ಲಿ ಹೌಸಿಂಗ್ ಬೋರ್ಡ್‌ಗೆ ಹೋಗಲು ಚನ್ನರಾಯಪಟ್ಟಣ ಟೌನ್ ರೈಲ್ವೆ ಬ್ರಿಡ್ಜ್ ಹತ್ತಿರ ಮೈಸೂರು ರಸ್ತೆಯಲ್ಲಿ ಹೋಗುತ್ತಿದ್ದಾಗ ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಗುಂಡಿ ನೆಗೆಸಿದ್ದರ ಪರಿಣಾಮ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮೂಡಲಯ್ಯನನ್ನು ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಶನಿವಾರ ಮಧ್ಯಾಹ್ನ ಮೂಡಲಯ್ಯ ಕೊನೆಯುಸಿರೆಳೆದಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net