ಬೈಕ್ ನಿಯಂತ್ರಣ ತಪ್ಪಿ ಬಿದ್ದು ಸವಾರ ಸಾವು

Bike Accident_2
Published on

ಹಾಸನ: ಚನ್ನರಾಯಪಟ್ಟಣದ ರೈಲ್ವೆ ಬ್ರಿಡ್ಜ್ ಹತ್ತಿರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಶನಿವಾರ ಮೃತಪಟ್ಟಿದ್ದಾರೆ.


ಚನ್ನರಾಯಪಟ್ಟಣ ತಾಲೂಕು ನುಗ್ಗೇಹಳ್ಳಿ ಹೋಬಳಿಯ ಮರಿಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಮೂಡಲಯ್ಯ(58) ಮೃತರು. ಬೈಕ್‌ನಲ್ಲಿ ಮೂಡಲಯ್ಯ ಗುರುವಾರ ಹೌಸಿಂಗ್ ಬೋರ್ಡ್‌ಗೆ ಹೋಗಲು ಚನ್ನರಾಯಪಟ್ಟಣದ ರೈಲ್ವೆ ಸೇತುವೆ ಹತ್ತಿರ ಮೈಸೂರು ರಸ್ತೆಯಲ್ಲಿ ಅತಿವೇಗವಾಗಿ ಓಡಿಸಿಕೊಂಡು ಬಂದು ಗುಂಡಿಗೆ ನೆಗೆಸಿದ್ದರ ಪರಿಣಾಮ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಶನಿವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net