ಬೈಕ್ ರ್ಯಾಲಿ ಮೂಲಕ ಮತದಾನ ಜಾಗೃತಿ ಅಭಿಯಾನ

ಬೈಕ್ ರ್ಯಾಲಿ ಮೂಲಕ ಮತದಾನ ಜಾಗೃತಿ ಅಭಿಯಾನ
Published on

ಹಾಸನ: ತಾಲೂಕಿನ ಕಟ್ಟಾಯ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಬೈಕ್ ರ್ಯಾಲಿ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ. ಗಿರೀಶ್ ಅವರು, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಶೇ. ನೂರರಷ್ಟು ಮತದಾನ ಗುರಿ ಸಾಧಿಸಲು ಕಟ್ಟಾಯ ಹೋಬಳಿಯಲ್ಲಿ ಬೈಕ್ ರ್ಯಾಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಕಳೆದ ಬಾರಿ ಕಟ್ಟಾಯ ಹೋಬಳಿಯ ಕೆಲವು ಮತಗಟ್ಟೆಯಲ್ಲಿ ಕಡಿಮೆ ಮಾತದಾನವಾಗಿದ್ದು, ಈ ಬಾರಿ ಏ.26 ರ ಶುಕ್ರವಾರದಂದು ಪ್ರತಿಯೊಬ್ಬರೂ ಮತಗಟ್ಟೆಗೆ ಬಂದು ಮತ ಚಲಾಯಿಸುವ ಮೂಲಕ ಶೇಕಡಾ ನೂರರಷ್ಟು ಮತದಾನ ಮಾಡಲು ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಬೈಕ್ ರ್ಯಾಲಿಯಲ್ಲಿ ಹಲವಾರು ಸಾರ್ವಜನಿಕರು ಭಾಗವಹಿಸಿ ಕಟ್ಟಾಯ ಗ್ರಾಮ ಪಂಚಾಯಿತಿಯ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಹಾಗೂ ಕಟ್ಟಾಯ ಹೋಬಳಿ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ ಗೊರೂರು ಗ್ರಾಮ ಪಂಚಾಯತಿಯ ನಾಲ್ಕು ಮತಗಟ್ಟೆಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾನ ಜಾಗೃತಿ ಸ್ಟಿಕ್ಕರ್‌ಅನ್ನು ಮನೆ ಬಾಗಿಲಿಗೆ ಅಂಟಿಸುವ ಮೂಲಕ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಿ.ಬಿ.ದಿನೇಶ್, ತಾಲೂಕು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕ ಮೋಹನ್, ಕೃಷ್ಣೇಗೌಡ, ಕಟ್ಟಾಯ ಹೋಬಳಿಯ ವಿವಿಧ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net