ಬೈಕ್ ವ್ಹೀಲಿಂಗ್ ಮಾಡುತ್ತಿದ್ದವನ ಬಂಧನ

Bike Wheeling
Published on

ಹಾಸನ: ನಗರದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೈಯದ್ ಜಸಿಂದ್ (43) ಬಂಧಿತ ಆರೋಪಿ

ಶುಕ್ರವಾರ ಬೆಳಗ್ಗೆ ಸುಮಾರು 11 ಗಂಟೆ ಸಮಯದಲ್ಲಿ ಪೆನ್ಷನ್‌ಮೊಹಲ್ಲಾ ಪೊಲೀಸ್ ಠಾಣಾ ಪಿಎಸ್‌ಐ ಲೋಹಿತ್ ಅವರು ರೌಂಡ್ಸ್ ನಲ್ಲಿದ್ದಾಗ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯ ಮುಂಭಾಗದದ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಾ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ಹಾನಿಯುಂಟಾಗುವಂತೆ ಬೈಕ್‌ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಓಡಿಸಿಕೊಂಡು ಹೋಗುತ್ತಿದ್ದ. ಇತನನ್ನು ಪೆನ್ಷನ್ ಮೊಹಲ್ಲಾ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net