ಬೈಲಕುಪ್ಪೆ: ಲಾರಿ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕುಶಾಲನಗರ ಕರಿಯಪ್ಪ ಬಡಾವಣೆಯ ಡಿ.ಎನ್.ಶಶಿ (46) ಮೃತ. ಪಿರಿಯಾಪಟ್ಟಣ ತಾಲೂಕು ಬೈಲಕುಪ್ಪೆ ಹೊನ್ನೂರು ಗೇಟ್ ಸಮೀಪ ಮಂಗಳವಾರ ಬಿಎಂ ರಸ್ತೆ ಕುಶಾಲನಗರ ಕಡೆಯಿಂದ ಡಿ.ಎನ್.ಶಶಿ ಪಿರಿಯಾಪಟ್ಟಣ ಕಡೆಗೆ ತೆರಳುತ್ತಿದ್ದ. ಈ ವೇಳೆ ಬೈಲಕುಪ್ಪೆಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ. ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಬೈಲಕುಪ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಅಜಯ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಕುಶಾಲನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಶವ ನೀಡಲಾಯಿತು.