ಬೈಕ್ ಸವಾರನ ಉಳಿಸಲು ಹೋಗಿ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ

TTH WEB
Published on

ತೀರ್ಥಹಳ್ಳಿ: ಸಮೀಪದ ಬಿಳಾಲುಕೊಪ್ಪ ಶಾಲೆಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಸಾರಿಗೆ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದೆ. ಆರೇಳು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ. ಓವರ್ ಟೇಕ್ ಮಾಡುವಾಗ ಅಡ್ಡ ಬಂದ ಬೈಕ್ ಸವಾರನನ್ನು ಉಳಿಸುವ ಯತ್ನದಲ್ಲಿ ಈ ಅಪಘಾತವಾಗಿದೆ. ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಈ ಬಸ್ಸಿನಲ್ಲಿ 30 ಪ್ರಯಾಣಿಕರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net