ಸಿದ್ದಾಪುರ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಸಿದ್ದಾಪುರದ ಹಂಸ ಹಾಗೂ ನಿಶಾರ್ ಪಿರಿಯಾಪಟ್ಟಣದಿಂದ ಸಿದ್ದಾಪುರಕ್ಕೆ ಸೋಮವಾರ ರಾತ್ರಿ ಬರುತ್ತಿದ್ದರು. ಸಿದ್ದಾಪುರ ಸಮೀಪದ ಕೆಸನಹಳ್ಳ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ. ಸ್ಥಳೀಯರು ಇಬ್ಬರನ್ನು ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ದಾಖಲಿಸಲು ನೆರವಾಗಿದ್ದಾರೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.