ಬೈಕ್‌ಗೆ ಕಾರು ಡಿಕ್ಕಿ, ಸವಾರ ಸಾವು

Anneppa Kandagul (CRIME)
Published on

ಕಮಲಾಪುರ: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆ.

ಮಹಾಗಾಂವ್ ಗ್ರಾಮದ ಅಡೆಪ್ಪ ಕಂದಗೂಳ (38) ಮೃತಪಟ್ಟವ. ಜು.17ರಂದು ಸಂಜೆ ಅಡೆಪ್ಪ ಬೈಕ್‌ನಲ್ಲಿ ಕುರಿಕೋಟಾಕ್ಕೆ ಹೋಗುತ್ತಿದ್ದಾಗ ಹುಮನಾಬಾದ್‌ನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಅಡೆಪ್ಪನನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ. ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net