ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

accident-15
Published on

ಹಾಸನ: ಹಾಸನ ಕಡೆಯಿಂದ ಅತ್ತಿಹಳ್ಳಿ ಕಡೆಗೆ ಹೋಗುತ್ತಿದ್ದ ಬೈಕಿಗೆ ಎದುರು ಗಡೆಯಿಂದ ಬಂದ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಹಾಸನ ತಾಲೂಕು, ಸಾಲಗಾಮೆ ಹೋಬಳಿ, ಅತ್ತಿಹಳ್ಳಿ ಗ್ರಾಮದ ಸ್ವಾಮಿ (44) ಮೃತ ದುರ್ದೈವಿ.

ಸ್ವಾಮಿ ಗುರುವಾರ ರಾತ್ರಿ 8 ಗಂಟೆಯ ಸಮಯದಲ್ಲಿ ಹಾಸನ ನಗರದಿಂದ ಅತ್ತಿಹಳ್ಳಿಗೆ ಹೋಗುವಾಗ ಎದುರುಗಡೆಯಿಂದ ವೇಗವಾಗಿ ಲಾರಿಯನ್ನು ಚಾಲನೆ ಮಾಡಿಕೊಂಡು ಬಂದ ಚಾಲಕ ಬೈಕಿಗೆ ಲಾರಿ ಗುದ್ದಿಸಿದ್ದಾರೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ರಸ್ತೆ ಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತ ಪ್ರಕರಣದ ಪ್ರತ್ಯಕ್ಷದರ್ಶಿಯಾದ ಅತ್ತಿಹಳ್ಳಿ ಗ್ರಾಮದ ಲೋಕೇಶ್ ಅವರು ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net