ಬೈಕ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

Bike Accident_2
Published on

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ-ಪಾಲಾರ್ ಮಾರ್ಗದಲ್ಲಿ ಗುರುವಾರ ಬೈಕ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಮೃತಪಟ್ಟಿದ್ದಾರೆ.

ತಮಿಳುನಾಡಿನ ತಿರುಪೂರಿನ ದೊರೆ ಪಾಂಡಿ ಮೃತರು. ಈತ ಮ.ಬೆಟ್ಟದ ಪುದೂರಿನಲ್ಲಿ ನಡೆಯುತ್ತಿದ್ದ ಮಾರಿಹಬ್ಬಕ್ಕೆ ಬೈಕ್‌ನಲ್ಲಿ ಆಗಮಿಸಿದ್ದು, ಗುರುವಾರ ತಿರುಪೂರ್‌ಗೆ ಹಿಂದಿರುಗುತ್ತಿರುವ ವೇಳೆ ಆಯತಪ್ಪಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮ.ಬೆಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿದರು. ಶುಕ್ರವಾರ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net