ಬೈಕ್‌ನಿಂದ ಬಿದ್ದು ಸವಾರ ಸಾವು

Accident
Published on

ಹಾಸನ: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಅಪಘಾತ ಆಗುವುದನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು, ಸವಾರ ಮೃತಪಟ್ಟಿದ್ದಾರೆ. ಹೊಳೆನರಸೀಪುರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮದ ಮಂಜೇಗೌಡ (48) ಮೃತರು.
ಮಂಜೇಗೌಡ ಅವರು ಬೆಳೆಗೆ ಸಿಂಪಡಿಸಲು ಔಷಧ ತರಲೆಂದು ಬೈಕ್‌ನಲ್ಲಿ ಪಟ್ಟಣಕ್ಕೆ ಹೋಗಿ ವಾಪಾಸ್ ಮನೆಗೆ ಮರಳುತ್ತಿದ್ದರು. ಈ ವೇಳೆ ತಾಲ್ಲೂಕಿನ ತಟ್ಟೆಕೆರೆ ಗ್ರಾಮದ ಬಾರೆಯಲ್ಲಿರುವ ದೇವಾಲಯದ ಮುಂಭಾಗದ ಹೊಳೇನರಸೀಪುರ-ಚನ್ನರಾಯಪಟ್ಟಣದ ರಾಜ್ಯ ಹೆದ್ದಾರಿಯ ತಿರುವಿನಲ್ಲಿ, ಬೈಕ್‌ಗೆ ನಾಯಿ ಅಡ್ಡಬಂದಿದ್ದರಿಂದ ಅಪಘಾತ ಆಗುವುದನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣಕ್ಕೆ ಸಿಗದೇ ಬಿದ್ದು, ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಮಂಜೇಗೌಡ ಅವರ ತಲೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಸಂಬಂಧ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net