

ಮೈಸೂರು: ರಾಜರಾಜೇಶ್ವರಿನಗರ ಬಳಿಯ ಹೊರವರ್ತುಲ ರಸ್ತೆಯಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡುವ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದು ಸವಾರ ಮೃತಪಟ್ಟಿದ್ದಾರೆ.
ಚಾಮರಾಜನಗರ ತಾಲೂಕಿನ ನಂಜೇದೇವನಪುರ ನಿವಾಸಿ ರವಿ(40) ಮೃತ ಸವಾರ. ಪುತ್ರನನ್ನು ನೋಡಲು ಪಿರಿಯಾಪಟ್ಟಣಕ್ಕೆ ಬೈಕಿನಲ್ಲಿ ತೆರಳುತ್ತಿದ್ದರು.
ಏಕಾಏಕಿ ನಿತ್ರಾಣಗೊಂಡು ವಾಹನ ಸಮೇತ ನೆಲಕ್ಕೆ ಉರುಳಿ ಬಿದ್ದಿದ್ದಾರೆ. ಸಾರ್ವಜನಿಕರು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗಲಿಲ್ಲ.
ಕುವೆಂಪುನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.