ಬೋಧನೆ ಜತೆಗೆ ನೈತಿಕ ಮೌಲ್ಯ

Moral values ​​along with teaching
Published on

ವಿಜಯಪುರ: ಶಿಕ್ಷಕರು ನಿತ್ಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತ, ಬೋಧನೆ ಜತೆಗೆ ನೈತಿಕ ಮೌಲ್ಯ, ಶಿಸ್ತು ಕಲಿಸುತ್ತಿರುವ ಕಾರ್ಯ ಶ್ಲಾನೀಯವಾದುದು ಎಂದು ಎಸ್​. ಕುಮಾರ ವಿದ್ಯಾವರ್ಧಕ ಸಂಸ್ಥೆ ಅಧ್ಯಕ್ಷ ಡಾ. ಎಚ್​.ಟಿ. ಲತಾದೇವಿ ಹೇಳಿದರು.

ನಗರದ ಹೊರವಲಯದ ಬರಟಗಿ ರಸ್ತೆಯಲ್ಲಿರುವ ಎಸ್​. ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಎಸ್​. ಕುಮಾರ ಮಹೇಶ ಪಿಯು ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್​ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಶಿಕ್ಷಕರ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಅವರ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ವಿದ್ಯಾರ್ಥಿಗಳು ಗುರುಗಳಿಗೆ ವಿಧೇಯರಾಗಿ ತಲೆಬಾಗಿ ನಡೆಯಬೇಕು ಎಂದು ಸಲಹೆ ನೀಡಿದರು.ಪ್ರಾಚಾರ್ಯ ಸದಾಶಿವ ವಾಲಿಕಾರ, ಮುಖ್ಯಶಿಕ್ಷಕ ಪ್ರಶಾಂತ ಹಿರೇಮಠ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಿಗಾಗಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಸುಜಾತಾ ಜೋರಾಪುರ ನಿರ್ವಹಿಸಿದರು.

ವಿಜಯಪುರ ಹೊರವಲಯದ ಎಸ್​. ಕುಮಾರ ವಿದ್ಯಾವರ್ಧಕ ಸಂಸ್ಥೆಯಲ್ಲಿ ಶಿಕ್ಷಕರ ದಿನ ಆಚರಿಸಲಾಯಿತು. ಡಾ. ಎಚ್​.ಟಿ. ಲತಾದೇವಿ, ಸದಾಶಿವ ವಾಲಿಕಾರ, ಪ್ರಶಾಂತ ಹಿರೇಮಠ ಮತ್ತಿತರರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net