ಬೋನಿಗೆ ಬಿದ್ದ ಗಂಡು ಚಿರತೆ

Published on

ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿ ಬೈರಾಪುರ ಗ್ರಾಮದ ತೋಟವೊಂದರಲ್ಲಿ ವಲಯ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ನಾಲ್ಕು ವರ್ಷದ ಗಂಡು ಚಿರತೆ ಎಂದು ಬಿದ್ದಿದೆ.


ಹಲವು ದಿನಗಳಿಂದ ಬೈರಾಪುರ ಗ್ರಾಮದ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು ಜಾನುವಾರುಗಳ ಮೇಲೆ ದಾಳಿ ಮಾಡುತಿತ್ತು. ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆಯೊಂದಿಗೆ ಬೋನು ಅಳವಡಿಸಿದ್ದರು.


ಭಾನುವಾರ ಬೆಳಗಿನ ಜಾವ ಬೋನಿಗೆ ಚಿರತೆ ಬಿದ್ದಿದೆ. ಸದ್ಯಕ್ಕೆ ಬೆಲಸಿಂದ ಸಸ್ಯ ಕ್ಷೇತ್ರಕ್ಕೆ ಚಿರತೆ ಇರುವ ಬೋನನ್ನು ಸ್ಥಳಾಂತರಿಸಲಾಗಿದ್ದು ಮೇಲಧಿಕಾರಿಗಳ ಆದೇಶದಂತೆ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ವಲಯ ಅರಣ್ಯ ಇಲಾಖೆ ಅಧಿಕಾರಿ ಪಲ್ಲವಿ ವಿಜಯವಾಣಿಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net