ಬೋರ್ ವೆಲ್ ಕೊರೆಸಲು ಅನುಮತಿ ಕೊಡಿ

suryakanth Nagmarpalli
Published on

ಬೀದರ್: ನಗರ ಸೇರಿ ಜಿಲ್ಲೆಯಲ್ಲಿ ಬೋರ್ ವೆಲ್ (ಕೊಳವೆ ಬಾವಿ) ಕೊರೆಸಲು ನಿಷೇಧಿಸಿದ ಆದೇಶವನ್ನು ರದ್ದು ಮಾಡಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಆಗ್ರಹಿಸಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಈ ಸಂಬಂಧ ಮನವಿ ಸಲ್ಲಿಸಿ, ಮಳೆ ಕೊರತೆಯಿಂದಾಗಿ 6 ವರ್ಷದಿಂದ ಜಿಲ್ಲಾಡಳಿತ ಹೊಸದಾಗಿ ಕೊಳವೆಬಾವಿ ಕೊರೆಯಲು ಅನುಮತಿ ನೀಡಲು ನಿಷೇಧಿಸಿದೆ. ಕೊಳವೆಬಾವಿಗೆ ನಿಷೇಧ ಹಿನ್ನೆಲೆಯಲ್ಲಿ ಅನೇಕ ಅಭಿವೃದ್ಧಿ ಕೆಲಸ ಸ್ಥಗಿತಗೊಂಡಿವೆ. ಆದರೆ ಪ್ರಸಕ್ತ ವರ್ಷ ಉತ್ತಮ ಮಳೆಯಾಗಿದ್ದು, ಬಹುತೇಕ ಜಲಾಶಯ, ಕೆರೆ, ಹಳ್ಳ ಭರ್ತಿಯಾಗಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಹೀಗಾಗಿ ಕೊಳವೆಬಾವಿ ಕೊರೆಸಲು ಅನುಮತಿ ನೀಡಬೇಕು. ಈ ಕುರಿತು ಜಿಲ್ಲಾಧಿಕಾರಿಗೆ ಸೂಕ್ತ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ. ಇವರ ಮನವಿಯ ಹಿನ್ನೆಲೆಯಲ್ಲಿ ಕಂದಾಯ ಸಚಿವರ ಆಪ್ತ ಕಾರ್ಯದರ್ಶಿಗಳು ಬೀದರ್ ಜಿಲ್ಲಾಧಿಕಾರಿಗೆ ಟಿಪ್ಪಣಿ ಕಳಿಸಿದ್ದು, ಈ ಬೇಡಿಕೆ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net