ಬೋಸ್ ಜನ್ಮ ದಿನದ ಪ್ರಯುಕ್ತ ಸ್ಪರ್ಧೆ ಆಯೋಜನೆ

Published on

ಚಾಮರಾಜನಗರ: ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮದಿನದ ಪ್ರಮುಕ್ತ ಎಐಡಿಎಸ್‌ಒ ಸಂಘಟನೆ ವತಿಯಿಂದ ಜನವರಿ ತಿಂಗಳಾದ್ಯಂತ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

‘ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ಐಎನ್‌ಎ ಪಾತ್ರ’ ಈ ವಿಷಯದ ಕುರಿತು ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಸ್ವರಚಿತ ಕವನ, ಚಿತ್ರಕಲೆ, ರಸಪ್ರಶ್ನೆ ಹಾಗೂ ಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪ್ರೌಢಶಾಲೆ, ಪಿಯು ಹಾಗೂ ಪದವಿ/ಇಂಜಿನಿಯರಿಂಗ್, ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯುತ್ತವೆ. ಪ್ರತಿ ಸ್ಪರ್ಧೆಗೆ ಪ್ರತ್ಯೇಕವಾಗಿ 10 ರೂ., ಮೂರು ಸ್ಪರ್ಧೆಯಲ್ಲಿ ಭಾಗವಹಿಸುವಂತಿದ್ದರೆ 20 ರೂ. ಶುಲ್ಕ ಇರುತ್ತದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರು ಮೊ: 93806 26673/81973 96461 ಸಂಖ್ಯೆಗೆ ಕರೆ ಮಾಡಿ ನೊಂದಾಯಿಸಿಕೊಳ್ಳಿ ಎಂದು ಜಿಲ್ಲಾ ಘಟಕದ ಸಂಚಾಲಕಿ ಚಂದ್ರಕಲಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net