ಬೌದ್ಧ ಭಿಕ್ಷುಗಳಿಂದ ಭವ್ಯ ಮೆರವಣಿಗೆ

Meravanige
Published on

ಚಿತ್ರದುರ್ಗ: ಬಸವೇಶ್ವರರ ನಾಡಿನಲ್ಲಿ ಬುದ್ಧ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ 600ಕ್ಕೂ ಅಧಿಕ ಮಂದಿ ಬೌದ್ಧ ಭಿಕ್ಷುಗಳಿಂದ ಭವ್ಯ ಮೆರವಣಿಗೆ ನಡೆಯಿತು.

ನೀಲಕಂಠೇಶ್ವರ ಸ್ವಾಮಿ ದೇಗುಲ ಮುಂಭಾಗ ಚಾಲನೆ ನೀಡಲಾಯಿತು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ರಾಜವೀರ ಮದಕರಿನಾಯಕ ಸೇರಿ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆಯೊಂದಿಗೆ ಗೌರವ ಸಲ್ಲಿಸಲಾಯಿತು.

ಸಾಂಪ್ರದಾಯಿಕ ಉಡುಪಿನಲ್ಲಿ ಬೌದ್ಧ ಭಿಕ್ಷುಗಳು ಗಮನ ಸೆಳೆದರು. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಶಿವಲಿಂಗಾನಂದ ಸ್ವಾಮೀಜಿ, ಸಾರ್ಕ್ ರಾಷ್ಟ್ರಗಳ ಪ್ರತಿನಿಧಿ ಜಿಗ್ಮೇ ಜುಂಗ್ನಿ, ಸಚಿವ ಸಂತೋಷ್ ಲಾಡ್, ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಮಾರಸಂದ್ರ ಮುನಿಯಪ್ಪ ಸೇರಿ ವಿವಿಧ ಸಮುದಾಯಗಳ ಮುಖಂಡರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net