

ಬಾಗಲಕೋಟೆ: ಜಿಲ್ಲೆಯ ಬದಾಮಿ, ಬಾಗಲಕೋಟೆ, ಬೀಳಗಿ, ಗುಳೇದಗುಡ್ಡ, ಹುನಗುಂದ, ಇಳಕಲ್ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಬ್ಯಾಂಕ್ ವ್ಯವಸ್ಥಾಪಕರುಗಳಿಗೆ ಎನ್.ಆರ್.ಎಲ್.ಎಂ ಯೋಜನೆಯ ಸ್ವ-ಸಹಾಯ ಸಂಘಗಳ ಬ್ಯಾಂಕ್ ಲಿಂಕೇಜ್ ಹಾಗೂ ಎಂಟಪ್ರ್ರೈಸ್ ಫೈನಾನ್ಸಿಂಗ್, ಸರ್ಕಾರದ ಯೋಜನೆಗಳ ಕುರಿತು ಹಮ್ಮಿಕೊಂಡ ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಬೆಂಗಳೂರಿನ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎನ್ ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು ಬ್ಯಾಂಕ್ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಸಂಘಗಳಿಗೆ ವಿಳಂಬ ಮಾಡದೇ ಸಾಲ ಮಂಜೂರು ಮಾಡಲು ಕರೆ ನೀಡಿದರು.
ಇದರಿಂದ ಮಹಿಳೆಯರು ಜೀವನೋಪಾಯ ಚಟುವಟಿಕೆ ಆರಂಭಿಸಲು, ಚಟುವಟಿಕೆ ಅಭಿವೃದ್ಧಿ ಪಡಿಸಲು ಅನುಕೂಲವಾಗಿ ಮಹಿಳೆಯರು ಆರ್ಥಿಕ ಅಭಿವೃದ್ಧಿ ಹೊಂದಲು ಸಹಾಯವಾಗುತ್ತದೆ. ಪ್ರತಿ ಗ್ರಾಮ ಪಂಚಾಯತನಲ್ಲಿ ಸಂಜೀವಿನಿ ಯೋಜನೆಯಡಿ ರಚಿಸಲಾದ ಒಕ್ಕೂಟಗಳಿವೆ ಬ್ಯಾಂಕ್ & ಒಕ್ಕೂಟಗಳು ಸಹಯೋಗದೊಂದಿಗೆ ಗ್ರಾಮೀಣ ಭಾಗದ ಜನರ ಪಿಎಂಎಸ್‍ಬಿವಾಯ್ ಮತ್ತು ಪಿಎಂಜೆಜೆಬಿವಾಯ್ ವಿಮೆ ಮಾಡಿಸಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಡಾ.ಪುನೀತ್ ಬಿ. ಆರ್, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ಜಿಲ್ಲಾ ಅಗ್ರಣಿ ಬ್ಯಾಂಕ್ ವ್ಯವಸ್ಥಾಪಕ ರಾಜಕುಮಾರ ಹೂಗಾರ, ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಸುಂದರೇಶ ಆರ್ ಹಾಗೂ ಎನ್.ಆರ್.ಎಲ್.ಎಮ್ ಜಿಲ್ಲಾ & ತಾಲೂಕು ಘಟಕದ ಸಿಬ್ಬಂದಿಗಳು ಹಾಜರಿದ್ದರು.