ಬ್ಯಾಂಕಿಂಗ್ ಉದ್ಯೋಗಗಳಿಗೆ ಉಚಿತ ತರಬೇತಿ

ಬ್ಯಾಂಕಿಂಗ್ ಉದ್ಯೋಗಗಳಿಗೆ ಉಚಿತ ತರಬೇತಿ
Published on

   ಹಾಸನ: ಬ್ಯಾಂಕಿಂಗ್ ಉದ್ಯೋಗಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಕೃಷಿಕ್ ಸರ್ವೋದಯ ಫೌಂಡೇಶನ್ ವತಿಯಿಂದ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿಕ್ ಫೌಂಡೇಶನ್ ಕಾರ್ಯದರ್ಶಿ ಎಚ್.ಪಿ. ಮೋಹನ್ ಹೇಳಿದರು.

ಹಾಸನ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪದವೀಧರರನ್ನು ಬ್ಯಾಂಕಿಂಗ್ ಉದ್ಯೋಗಗಳಿಗೆ ಉತ್ತೇಜನ ನೀಡುವ ಸಲುವಾಗಿ ಈ ಯೋಜನೆ ರೂಪಿಸಲಾಗಿದೆ. ಉಚಿತ ತರಬೇತಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ಜುಲೈ 21 ರ ಒಳಗೆ ನಗರದ ಸಾಲಗಾಮೆ ರಸ್ತೆಯಲ್ಲಿ ಇರುವ ಕೃಷಿಕ್ ಸರ್ವೋದಯ ಫೌಂಡೇಶನ್ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜುಲೈ 22ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, 23ರಿಂದ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ ಆರಂಭವಾಗಲಿದೆ. ಹಾಸನ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಉಚಿತ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕೃಷಿಕ ಫೌಂಡೇಶನ್ ಪದಾಧಿಕಾರಿಗಳಾದ ವಿರೂಪಾಕ್ಷ, ಐ.ಎಂ. ಮೋಹನ್, ಸುಬ್ಬಸ್ವಾಮಿ, ಮಂಜುನಾಥ್, ಸುಬ್ರಮಣ್ಯ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net