ಬ್ಯಾಂಕ್‌, ಅಂಚೆ ಕಚೇರಿಗಳಲ್ಲಿ ಕನ್ನಡದಲ್ಲೇ ವ್ಯವಹರಿಸಲು ಆಗ್ರಹ

Vijayasene
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.6619838, 0.47628558);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;
Published on

ಚಿತ್ರದುರ್ಗ: ರಾಷ್ಟ್ರೀಕೃತ ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ಕನ್ನಡ ಭಾಷೆ ಬಾರದ ಅಧಿಕಾರಿ, ನೌಕರರಿಂದಾಗಿ ಗ್ರಾಹಕರು ವ್ಯವಹರಿಸಲು ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕನ್ನಡದಲ್ಲೇ ವ್ಯವಹರಿಸಲು ಕ್ರಮವಹಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಸಿಎಂಗೆ ಮನವಿ ರವಾನಿಸಿದರು.

ಬ್ಯಾಂಕ್-ಅಂಚೆ ಕಚೇರಿಗಳಲ್ಲಿ ಹಿಂದಿ, ಇಂಗ್ಲಿಷ್ ಸೇರಿ ಅನ್ಯ ಭಾಷೆ ಮಾತನಾಡುವ ನೌಕರರೆ ಹೆಚ್ಚಾಗಿದ್ದು, ಕನ್ನಡಿಗರು ವ್ಯವಹರಿಸಲು ಸಾಧ್ಯವಾಗದೆ ಪರದಾಡುವಂತಾಗಿದೆ. ಕನ್ನಡಿಗರನ್ನೇ ನೇಮಿಸುವಂತೆ ಈ ಹಿಂದೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದಿಸಿಲ್ಲ ಎಂದು ಬೇಸರಿಸಿದರು. ಇನ್ನಾದರೂ ಎಚ್ಚೆತ್ತುಕೊಂಡು ಉದ್ಯೋಗ ಕಲ್ಪಿಸುವಂತೆ ಆಗ್ರಹಿಸಿದರು.

ಹಿಂದಿ, ಇಂಗ್ಲಿಷ್‌ನ ಚಲನ್‌ಗಳನ್ನು ಕನ್ನಡದಲ್ಲಿ ಮುದ್ರಿಸಿ, ಅನುಕೂಲ ಮಾಡಿಕೊಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟದ ಸ್ವರೂಪ ಬದಲಾಗಲಿದೆ ಎಂದು ವಿಜಯಸೇನೆ ಅಧ್ಯಕ್ಷ ಕೆ.ಟಿ.ಶಿವಕುಮಾರ್ ಎಚ್ಚರಿಸಿದರು.

ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಗೌರಣ್ಣ, ಪದಾಧಿಕಾರಿಗಳಾದ ಎಸ್.ಗೋಪಿನಾಥ್, ಎನ್.ಸಂತೋಷ್, ಅವಿನಾಶ್, ವಿ.ನಾಗೇಶ್, ಹರೀಶ್‌ಕುಮಾರ್, ಪಿ.ಆರ್.ತಿಪ್ಪೇಸ್ವಾಮಿ, ಸಿ.ಅಖಿಲೇಶ್ ನಾಯ್ಕ, ಜಿ.ಪಿ.ನಿರಂಜನ್, ಯರ‌್ರಿಸ್ವಾಮಿ, ನಾಗರಾಜ, ಕಮಲಾ, ನಿಸಾರ್ ಅಹಮದ್, ಕೆ.ರತ್ನಮ್ಮ, ಕೆ.ಎನ್.ಮಧುಸೂದನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net