ಬ್ಯಾಂಕ್ ಆಫ್ ಬರೋಡಾ ಸಂಸ್ಥಾಪನಾ ದಿನಾಚರಣೆ

Oplus_131072
ಸಹಾಯಕ ವ್ಯವಸ್ಥಾಪಕ ಸಂತೋಷ್, ಸರ್ಕಾರಿ ಕಾಲೇಜಿನ ಉಪನ್ಯಾಸಕಿ ಆಶಾ, ಗ್ರಾಹಕಾರದ ಪಿ.ಕೆ.ಶಿವರಾಜು, ನವೀನ್, ಗಂಗಾಧರ್, ಭಾವರ್ಲಾಲ್, ಉದ್ಯಮಿಗಳು ಇದ್ದರು.
Published on

ಹಂಪಾಪುರ: ಎಚ್.ಡಿ.ಕೋಟೆ ತಾಲೂಕು ಹಂಪಾಪುರ ಹೋಬಳಿಯ ಬ್ಯಾಂಕ್ ಆಫ್ ಬರೋಡಾದ ಹೊಮ್ಮರಗಳ್ಳಿ ಶಾಖೆಯ 117ನೇ ಸಂಸ್ಥಾಪನಾ ದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು.

ಕಚೇರಿಯಲ್ಲಿ ಬ್ಯಾಂಕ್ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರು, ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಬ್ಯಾಂಕ್ ವ್ಯವಸ್ಥಾಪಕ ವ್ಯಕುಂಠ ಮಾತನಾಡಿ, 117 ವಸಂತಗಳಲ್ಲಿ ಬ್ಯಾಂಕ್ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿಕೊಂಡು ಬಂದಿದೆ. ಗ್ರಾಹಕರ ಸೇವೆಯೇ ನಮ್ಮ ಮೂಲ ಮಂತ್ರವಾಗಿದ್ದು, ಗ್ರಾಹಕರ ಅಗತ್ಯತೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಇದೀಗ ಗ್ರಾಹಕರೊಂದಿಗೆ ಒಡಗೂಡಿ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದ್ದೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net